Tuesday, September 27, 2011

ಆಳ್ವಾಸ್ ನುಡಿಸಿರಿಗೆ ನಾಂದಿ

ರಾಜ್ಯ - ರಾಷ್ಟ್ರ

ನವೆಂಬರ್ 11 - 13 : ಮೂಡಬಿದಿರೆಯಲ್ಲಿ ಕನ್ನಡದ ಕಲರವ




ಮೂಡಬಿದಿರೆ: ಆಳ್ವಾಸ್ ಎಜುಕೇಷನ್ ಫೌಂಡೇಷನ್ ಆಶ್ರಯದಲ್ಲಿ ಎಂಟನೇ ವರುಷದ " ಆಳ್ವಾಸ್ ನುಡಿಸಿರಿ" ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಇದೇ ನವೆಂಬರ್ 11, 12 ಮತ್ತು 13ರಂದು ಮೂಡಬಿದಿರೆಯ ವಿದ್ಯಾಗಿರಿಯಲ್ಲಿರುವ ಸುಂದರಿ ಆನಂದ ಆಳ್ವ ಕ್ಯಾಂಪಸ್ ನಲ್ಲಿ ಹಲವು ವೈಶಿಷ್ಟ್ಯಗಳೊಂದಿಗೆ, ಶಿಸ್ತುಬದ್ಧ ರೀತಿಯಲ್ಲಿ ನಡೆಯಲಿದೆ.ಇದಕ್ಕಾಗಿ ಭರದ ಸಿದ್ಧತೆಗಳು ಪ್ರಾರಂಭವಾಗಿದೆ ಎಂದು ಆಳ್ವಾಸ್ ನುಡಿಸಿರಿ ರೂವಾರಿ, ಆಳ್ವಾಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.


ಕಳೆದ ಏಳು ವರುಷಗಳಿಂದ ಆಳ್ವಾಸ್ ಸಮೂಹ ಸಂಸ್ಥೆ ಯಾವುದೇ ಸರಕಾರಿ ನೆರವನ್ನೂ ಪಡೆಯದೆ ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ನುಡಿಸಿರಿಯನ್ನು ಆಯೋಜಿಸುತ್ತಾ ಬಂದಿದ್ದು, ಸಮಯಪ್ರಜ್ಞೆ, ವ್ಯವಸ್ಥೆ,ಶಿಸ್ತುಬದ್ಧ ಕಾರ್ಯಕ್ರಮ ಸಂಯೋಜನೆಗಳ ಮೂಲಕ "ಮಾದರಿ ಸಮ್ಮೇಳನ" ಎಂಬ ಪ್ರಶಂಸೆಯನ್ನು ಸಮಸ್ತ ಕನ್ನಡಿಗರಿಂದ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಬಾರಿಯೂ ಸಮ್ಮೇಳನವನ್ನು ಸಂಪೂರ್ಣ ಪಾರದರ್ಶಕವಾಗಿ, ವ್ಯವಸ್ಥಿತ ರೀತಿಯಲ್ಲಿ ಸಂಯೋಜನೆಗೊಳಿಸುವ ನಿಟ್ಟಿನಲ್ಲಿ , ಸಮ್ಮೇಳನದಲ್ಲಿ ಜನತೆಯ ಸಹಭಾಗಿತ್ವ ಇನ್ನಷ್ಟು ಮೂಡಬೇಕೆಂಬ ಮಹತ್ವಾಕಾಂಕ್ಷೆಯಿಂದ ಕರ್ನಾಟಕದ ವಿವಿಧ ಕಡೆಗಳಲ್ಲಿ ನುಡಿಸಿರಿ ಪೂರ್ವಭಾವೀ ಸಮಾಲೋಚನಾ ಸಭೆಗಳನ್ನು ನಡೆಸುವ ಬಗ್ಗೆ ಚಿಂತಿಸಲಾಗಿದೆ ಎಂದು ಡಾ.ಆಳ್ವ ತಿಳಿಸಿದರು.

ರಾಜ್ಯದ ಆಯ್ದ ಪ್ರದೇಶಗಳಲ್ಲಿ ಈ ಸಮಾಲೋಚನಾ ಸಭೆ ನಡೆಸಲು ಉದ್ದೇಶಿಸಲಾಗಿದೆ. ನುಡಿಸಿರಿ ಪೂರ್ವಭಾವೀ ಸಮಾಲೋಚನಾ ಸಭೆಗಳನ್ನು ತಮ್ಮ ಕ್ಷೇತ್ರಗಳಲ್ಲಿ ನಡೆಸಲು ಆಸಕ್ತ ಕನ್ನಡಾಭಿಮಾನಿಗಳು ಉತ್ಸುಕರಾಗಿದ್ದಲ್ಲಿ ಆಳ್ವಾಸ್ ಸಂಸ್ಥೆಯ ನುಡಿಸಿರಿ ಕಛೇರಿಯನ್ನು ಸಂಪರ್ಕಿಸಬಹುದು. ಸಮಾಲೋಚನಾ ಸಭೆಗಳನ್ನು ನಡೆಸುವ ಸಂದರ್ಭದಲ್ಲಿ ಸಮ್ಮೇಳನಕ್ಕೆ ಸದಸ್ಯರಾಗಿ ಭಾಗವಹಿಸಲು ಉತ್ಸಕರಾಗಿರುವವರು ಸ್ಥಳದಲ್ಲೇ ಹೆಸರು ನೋಂದಾಯಿಸಿ ಸದಸ್ಯತ್ವ ಪಡೆದುಕೊಳ್ಳಲು ಅವಕಾಶವಿರುತ್ತದೆ.

ಜಾಗತಿಕ ಸಮ್ಮೇಳನ
ಹತ್ತನೇ ವರುಷದ ನುಡಿಸಿರಿ ಸಮ್ಮೇಳನವನ್ನು ಜಾಗತಿಕ ಮಟ್ಟದ ಸಮ್ಮೇಳನವಾಗಿ ಆಯೋಜಿಸಲಾಗವುದು. ಇದಕ್ಕೆ ಪೂರಕ ಯೋಜನೆ, ಯೋಚನೆಗಳು ಪ್ರಗತಿಯಲ್ಲಿವೆ. ವಿಭಿನ್ನವಾಗಿ, ಅತ್ಯಂತ ವೈಭವಯುತವಾಗಿ ಅಷ್ಟೇ ವ್ಯವಸ್ಥಿತವಾಗಿ ಹತ್ತನೇ ವರುಷದ ನುಡಿಸಿರಿ ಸಮ್ಮೇಳನ ಮೂಡಿಬರಲಿದೆ ಎಂಬ ಆಶಾಭಾವವನ್ನು ಡಾ.ಆಳ್ವ ವ್ಯಕ್ತಪಡಿಸಿದರು.

ಎಲ್ಲಾಜಿಲ್ಲೆಯಿಂದ ಪ್ರತಿನಿಧಿಗಳು
ಈ ಬಾರಿಯ ನುಡಿಸಿರಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಕನ್ನಡಾಸಕ್ತರು ಪ್ರತಿನಿಧಿಗಳಾಗಿ ಭಾಗವಹಿಸಬೇಕೆಂಬ ಆಸೆ ನಮ್ಮದು. ಕಳೆದ ವರುಷವೂ ಬಹುತೇಕ ಎಲ್ಲಾ ಜಿಲ್ಲೆಗಳಿಂದ ಪ್ರತಿನಿಧಿಗಳು ಆಗಮಿಸಿದ್ದಾರೆ.ಈ ಬಾರಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿನಿಧಿಗಳಾಗಿ ಕನ್ನಡಿಗರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಬೇಕೆಂಬುದು ನಮ್ಮ ಆಸೆ. ಇದಕ್ಕಾಗಿ ಪ್ರತೀ ಜಿಲ್ಲೆಯಲ್ಲಿಯೂ ನುಡಿಸಿರಿಯ ಬಗ್ಗೆ ಸೂಕ್ತ ಮಾಹಿತಿ ಲಭ್ಯವಾಗುವಂತೆ ಪ್ರಚಾರ ಕೈಗೊಳ್ಳಲಾಗುವುದು ಎಂದರು.

ಯುವ ಮನಸ್ಸು ಪಾಲ್ಗೊಳ್ಳಲಿ
ಯುವ ಮನಸ್ಸುಗಳು ಕನ್ನಡವನ್ನು ಕಟ್ಟುವ, ಬೆಳೆಸುವ ಕಾರ್ಯ ಮಾಡಬೇಕಾಗಿದೆ. ಇಂತಹ ಯುವ ಮನಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ನುಡಿಸಿರಿ ಸಮ್ಮೇಳನದಲ್ಲಿ ಭಾಗವಹಿಸಬೇಕಾಗಿದೆ. ಯುವ ಜನತೆಯಲ್ಲಿ ಕನ್ನಡದ ಬಗೆಗಿನ ಆಸಕ್ತಿ ಉಂಟಾದಲ್ಲಿ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯ. ಆ ನಿಟ್ಟಿನಲ್ಲಿ ಯುವ ಮನಸ್ಸುಗಳು ಈ ಸಮ್ಮೇಳನದಲ್ಲಿ ಭಾಗವಹಿಸಲು ಉತ್ಸುಕರಾಗಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಮಾಧ್ಯಮ ಸಂಪರ್ಕಾಧಿಕಾರಿ, ಪತ್ರಿಕೋದ್ಯಮ ಉಪನ್ಯಾಸಕ ಹರೀಶ್ ಕೆ.ಆದೂರು ಉಪಸ್ಥಿತರಿದ್ದರು.

ಆಳ್ವಾಸ್ ನುಡಿಸಿರಿ ಅಧ್ಯಕ್ಷರಾಗಿ ಕಲಬುರ್ಗಿ

ಆಳ್ವಾಸ್ ನುಡಿಸಿರಿ ಅಧ್ಯಕ್ಷರಾಗಿ ಕಲಬುರ್ಗಿ

ಮಂಗಳೂರು, ಸೆ.26: ಆಳ್ವಾಸ್ ಎಜುಕೇಷನ್ ಫೌಂಡೇಶನ್ ಆಶ್ರಯದಲ್ಲಿ ಮೂಡಬಿದ್ರೆಯಲ್ಲಿ ನವೆಂಬರ್ 11ರಿಂದ 13ರವರೆಗೆ ನಡೆಯಲಿರುವ ಎಂಟನೆ ವರ್ಷದ ಆಳ್ವಾಸ್ ನುಡಿಸಿರಿ ಸಾಹಿತ್ಯ ಸಮ್ಮೇಳನ ನಾಡೋಜ ಡಾ.ಎಂ.ಎಂ.ಕಲಬುರ್ಗಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಆಳ್ವಾಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವಾ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕನ್ನಡ ಮನಸ್ಸು ಸಂಘರ್ಷ ಮತ್ತು ಸಾಮರಸ್ಯ-ಪರಿಕಲ್ಪನೆಯಲ್ಲಿ ಈ ಬಾರಿಯ ನುಡಿಸಿರಿ ಸಮ್ಮೇಳನ ನಡೆಯಲಿದೆ. ಕಳೆದ ಏಳು ವರ್ಷಗಳಲ್ಲಿ ಸರಕಾರದ ಯಾವುದೇ ನೆರವು ಪಡೆಯದೆ ಮಾದರಿ ಸಮ್ಮೇಳನ ನಡೆಸಿದ ಪ್ರಶಂಸೆ ನಾಡಿನ ಜನರಿಂದ ವ್ಯಕ್ತವಾಗಿದೆ. ಸಮ್ಮೇಳನದಲ್ಲಿ ಜನಸಹ ಭಾಗಿತ್ವ ಹೆಚ್ಚಿಸಲು ನಾಡಿನ ವಿವಿಧ ಕಡೆಗಳಲ್ಲಿ ಸಮಾಲೋಚನೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಾಗುವುದು ಹಾಗೂ ಸ್ಥಳೀಯ ಸಮಿತಿ ರಚಿಸಲಾಗುವುದು. ಕನ್ನಡ ಕಟ್ಟುವ ಕೆಲಸದಲ್ಲಿ ಯುವ ಮನಸ್ಸುಗಳು ಹೆಚ್ಚು ಪಾಲ್ಗೊಳ್ಳಬೇಕಾಗಿದೆ ಎಂದು ಆಳ್ವಾ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಕಾರ್ಯದರ್ಶಿ ಧನಂಜಯ ಕುಂಬ್ಳೆ, ಮಾಧ್ಯಮ ಸಂಪರ್ಕಾಧಿಕಾರಿ ಹರೀಶ್ ಆದೂರು ಉಪಸ್ಥಿತರಿದ್ದರು.

ಜಾಗತಿಕ ಸಮ್ಮೇಳನ ಮುಂದಿನ ಗುರಿ
ಹತ್ತನೆ ವರ್ಷದ ನುಡಿಸಿರಿ ಸಮ್ಮೇಳನವನ್ನು ಜಾಗತಿಕ ಸಮ್ಮೇಳನವಾಗಿ ಆಯೋಜಿಸುವ ಗುರಿ ಹೊಂದಲಾಗಿದೆ. ಇದಕ್ಕೆ ಪೂರಕ ವಾದ ತಯಾರಿ ಈಗಾಗಲೇ ನಡೆಯುತ್ತಿದೆ ಎಂದು ಮೋಹನ ಆಳ್ವಾ ತಿಳಿಸಿದರು.

ಎಂ.ಎಂ. ಕಲಬುರ್ಗಿ ಅವರಿಗೆ ಆಳ್ವಾಸ್‌ ನುಡಿಸಿರಿ ಅಧ್ಯಕ್ಷಗಿರಿ

ಎಂ.ಎಂ. ಕಲಬುರ್ಗಿ ಅವರಿಗೆ ಆಳ್ವಾಸ್‌ ನುಡಿಸಿರಿ ಅಧ್ಯಕ್ಷಗಿರಿ
Udayavani | Sep 26, 2011
ಮೂಡಬಿದಿರೆ: ಆಳ್ವಾಸ್‌ ಎಜುಕೇಶನ್‌ ಫೌಂಡೇಶನ್‌ ಆಶ್ರಯದಲ್ಲಿ ನ. 11ರಿಂದ 13ರ ತನಕ ಮೂಡಬಿದಿರೆಯಲ್ಲಿ ನಡೆಯಲಿರುವ 8ನೇ ವರ್ಷದ ಆಳ್ವಾಸ್‌ ನುಡಿಸಿರಿಯ ಅಧ್ಯಕ್ಷರಾಗಿ ಸಂಶೋಧಕ ಎಂ.ಎಂ. ಕಲಬುರ್ಗಿ ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ ಎಂದು ಆಳ್ವಾಸ್‌ ನುಡಿಸಿರಿ ರೂವಾರಿ, ಆಳ್ವಾಸ್‌ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಎಂ.ಎಂ. ಕಲಬುರ್ಗಿ ಅವರು ಹಂಪಿ ವಿಶ್ವವಿದ್ಯಾನಿಲಯ ಕೊಡಮಾಡುವ ಪ್ರತಿಷ್ಠಿತ ನಾಡೋಜ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿದ್ದಾರೆ. ಕಳೆದ ವರ್ಷ ಲೇಖಕಿ ವೈದೇಹಿ ನುಡಿಸಿರಿಯ ಸಾರಥ್ಯ ವಹಿಸಿದ್ದರು ಎಂದರು.

'ಕನ್ನಡ ಮನಸ್ಸು ಸಂಘರ್ಷ ಮತ್ತು ಸಾಮರಸ್ಯ' ಪರಿಕಲ್ಪನೆಯಲ್ಲಿ ಈ ಬಾರಿಯ ಆಳ್ವಾಸ್‌ ನುಡಿಸಿರಿ ಸಮ್ಮೇಳನ ನಡೆಯಲಿದೆ. ಕಳೆದ 7 ವರ್ಷಗಳಿಂದ ಆಳ್ವಾಸ್‌ ಸಮೂಹ ಸಂಸ್ಥೆ ಯಾವುದೇ ಸರಕಾರಿ ನೆರವು ಪಡೆಯದೆ ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ನುಡಿಸಿರಿಯನ್ನು ಆಯೋಜಿಸುತ್ತಾ ಬಂದಿದ್ದು, ಸಮಯಪ್ರಜ್ಞೆ , ವ್ಯವಸ್ಥೆ, ಶಿಸ್ತುಬದ್ಧ ಕಾರ್ಯಕ್ರಮ ಸಂಯೋಜನೆಗಳ ಮೂಲಕ ಮಾದರಿ ಸಮ್ಮೇಳನ ಎಂಬ ಪ್ರಶಂಸೆಯನ್ನು ಸಮಸ್ತ ಕನ್ನಡಿಗರಿಂದ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಬಾರಿಯೂ ಸಮ್ಮೇಳನವನ್ನು ವ್ಯವಸ್ಥಿತ ರೀತಿಯಲ್ಲಿ ಸಂಯೋಜನೆಗೊಳಿಸುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವಭಾವೀ ಸಮಾಲೋಚನಾ ಸಭೆಗಳನ್ನು ನಡೆಸುವ ಬಗ್ಗೆ ಚಿಂತಿಸಲಾಗಿದೆ ಎಂದು ಡಾ| ಆಳ್ವ ತಿಳಿಸಿದರು.

ಆಳ್ವಾಸ್‌ ನುಡಿಸಿರಿ ಪೂರ್ವಭಾವೀ ಸಮಾಲೋಚನಾ ಸಭೆಗಳನ್ನು ತಮ್ಮ ಕ್ಷೇತ್ರಗಳಲ್ಲಿ ನಡೆಸಲು ಆಸಕ್ತ ಕನ್ನಡಾಭಿಮಾನಿಗಳು ಉತ್ಸುಕರಾಗಿದ್ದಲ್ಲಿ ಆಳ್ವಾಸ್‌ ಸಂಸ್ಥೆಯ ನುಡಿಸಿರಿ ಕಚೇರಿಯನ್ನು ಸಂಪರ್ಕಿಸಬಹುದು. ಪ್ರತಿವರ್ಷದಂತೆ ಈ ಬಾರಿಯೂ ನುಡಿಸಿರಿ ಸಮ್ಮೇಳನದ ಮೂರು ದಿನಗಳಲ್ಲೂ ರಾತ್ರಿ ಅಗ್ರಮಾನ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ ಪ್ರದರ್ಶನಗೊಳ್ಳಲಿದೆ.

ಜಾಗತಿಕ ಸಮ್ಮೇಳನ

ಹತ್ತನೇ ವರ್ಷದ ನುಡಿಸಿರಿ ಸಮ್ಮೇಳನವನ್ನು ಜಾಗತಿಕ ಮಟ್ಟದ ಸಮ್ಮೇಳನವಾಗಿ ಆಯೋಜಿಸಲಾಗುವುದು. ಇದಕ್ಕೆ ಪೂರಕ ಯೋಜನೆ, ಯೋಚನೆಗಳು ಪ್ರಗತಿಯಲ್ಲಿವೆ. ವಿಭಿನ್ನವಾಗಿ, ಅತ್ಯಂತ ವೈಭವಯುತವಾಗಿ ಅಷ್ಟೇ ವ್ಯವಸ್ಥಿತವಾಗಿ ಹತ್ತನೇ ವರ್ಷದ ನುಡಿಸಿರಿ ಸಮ್ಮೇಳನ ಮೂಡಿಬರಲಿದೆ ಎಂಬ ಆಶಾಭಾವವನ್ನು ಡಾ| ಆಳ್ವ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನುಡಿಸಿರಿ ಸ್ವಾಗತ ಸಮಿತಿಯ ಕಾರ್ಯದರ್ಶಿ ಡಾ| ಧನಂಜಯ ಕುಂಬ್ಳೆ, ಹರೀಶ್‌ ಆದೂರು ಉಪಸ್ಥಿತರಿದ್ದರು.

ನ. 11ರಿಂದ ಮೂಡಬಿದ್ರೆಯಲ್ಲಿ ‘ಆಳ್ವಾಸ್‌ ನುಡಿಸಿರಿ’

ನ. 11ರಿಂದ ಮೂಡಬಿದ್ರೆಯಲ್ಲಿ ‘ಆಳ್ವಾಸ್‌ ನುಡಿಸಿರಿ’
ಸೋಮವಾರ - ಸೆಪ್ಟೆಂಬರ್ -19-2011
ಮೂಡಬಿದ್ರೆ, ಸೆ 18: ಆಳ್ವಾಸ್ ಎಜುಕೇಷನ್ ಫೌಂಡೇಶನ್ ಆಶ್ರಯದಲ್ಲಿ ಎಂಟನೆ ವರ್ಷದ ‘ಆಳ್ವಾಸ್ ನುಡಿಸಿರಿ’ ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ನವೆಂಬರ್ 11, 12 ಮತ್ತು 13ರಂದು ಮೂಡಬಿದ್ರೆಯ ವಿದ್ಯಾಗಿರಿಯಲ್ಲಿರುವ ಸುಂದರಿ ಆನಂದ ಆಳ್ವ ಕ್ಯಾಂಪಸ್‌ನಲ್ಲಿ ಹಲವು ವೈಶಿಷ್ಟ್ಯಗಳೊಂದಿಗೆ, ಶಿಸ್ತುಬದ್ಧ ರೀತಿಯಲ್ಲಿ ನಡೆಯ ಲಿದೆ. ಇದಕ್ಕಾಗಿ ಭರದ ಸಿದ್ಧತೆಗಳು ಪ್ರಾರಂಭವಾಗಿವೆ ಎಂದು ಆಳ್ವಾಸ್ ನುಡಿಸಿರಿ ರೂವಾರಿ, ಆಳ್ವಾಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ರಾಜ್ಯದ ಆಯ್ದ ಪ್ರದೇಶಗಳಲ್ಲಿ ಈ ಸಮಾಲೋಚನಾ ಸಭೆ ನಡೆಸಲು ಉದ್ದೇಶಿಸಲಾಗಿದೆ. ನುಡಿಸಿರಿ ಪೂರ್ವಭಾವಿ ಸಮಾಲೋಚನಾ ಸಭೆಗಳನ್ನು ತಮ್ಮ ಕ್ಷೇತ್ರಗಳಲ್ಲಿ ನಡೆಸಲು ಆಸಕ್ತ ಕನ್ನಡಾಭಿಮಾನಿಗಳು ಉತ್ಸುಕರಾಗಿದ್ದಲ್ಲಿ ಆಳ್ವಾಸ್ ಸಂಸ್ಥೆಯ ನುಡಿಸಿರಿ ಕಚೇರಿಯನ್ನು ಸಂಪರ್ಕಿಸಬಹುದು.ಸಮಾಲೋಚನಾ ಸಭೆಗಳನ್ನು ನಡೆಸುವ ಸಂದರ್ಭದಲ್ಲಿ ಸಮ್ಮೇಳನಕ್ಕೆ ಸದಸ್ಯರಾಗಿ ಭಾಗವಹಿಸಲು ಉತ್ಸುಕರಾಗಿರುವವರು ಸ್ಥಳದಲ್ಲೇ ಹೆಸರು ನೋಂದಾಯಿಸಿ ಸದಸ್ಯತ್ವ ಪಡೆದುಕೊಳ್ಳಲು ಅವಕಾಶವಿದೆ.
ಜಾಗತಿಕ ಸಮ್ಮೇಳನ:ಹತ್ತನೆ ವರ್ಷದ ನುಡಿಸಿರಿ ಸಮ್ಮೇಳನವನ್ನು ಜಾಗತಿಕ ಮಟ್ಟದ ಸಮ್ಮೇಳನವಾಗಿ ಆಯೋಜಿಸಲಾಗುವುದು. ಇದಕ್ಕೆ ಪೂರಕ ಯೋಜನೆ, ಯೋಚನೆಗಳು ಪ್ರಗತಿಯಲ್ಲಿವೆ. ವಿಭಿನ್ನವಾಗಿ ಅತ್ಯಂತ ವೈಭವಯುತವಾಗಿ ಅಷ್ಟೇ ವ್ಯವಸ್ಥಿತವಾಗಿ ಹತ್ತನೆ ವರ್ಷದ ನುಡಿಸಿರಿ ಸಮ್ಮೇಳನ ಮೂಡಿಬರಲಿದೆ ಎಂಬ ಆಶಾಭಾವವನ್ನು ಡಾ.ಆಳ್ವ ವ್ಯಕ್ತಪಡಿಸಿದರು.
ಎಲ್ಲ ಜಿಲ್ಲೆಯಿಂದ ಪ್ರತಿನಿಧಿಗಳು: ಈ ಬಾರಿಯ ನುಡಿಸಿರಿಗೆ ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಕನ್ನಡಾಸಕ್ತರು ಪ್ರತಿನಿಧಿಗಳಾಗಿ ಭಾಗವಹಿಸಬೇಕೆಂಬ ಆಸೆ ನಮ್ಮದು. ಕಳೆದ ವರ್ಷವೂ ಬಹುತೇಕ ಎಲ್ಲ ಜಿಲ್ಲೆಗಳಿಂದ ಪ್ರತಿನಿಧಿಗಳು ಆಗಮಿಸಿದ್ದಾರೆ. ಈ ಬಾರಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿನಿಧಿಗಳಾಗಿ ಕನ್ನಡಿಗರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಬೇಕೆಂಬುದು ನಮ್ಮ ಆಸೆ. ಇದಕ್ಕಾಗಿ ಪ್ರತಿ ಜಿಲ್ಲೆಯಲ್ಲಿಯೂ ನುಡಿಸಿರಿಯ ಬಗ್ಗೆ ಸೂಕ್ತ ಮಾಹಿತಿ ಲಭ್ಯವಾಗುವಂತೆ ಪ್ರಚಾರ ಕೈಗೊಳ್ಳಲಾಗುವುದು ಎಂದರು.
ಯುವ ಮನಸ್ಸು ಪಾಲ್ಗೊಳ್ಳಲಿ: ಯುವ ಮನಸ್ಸುಗಳು ಕನ್ನಡವನ್ನು ಕಟ್ಟುವ ಬೆಳೆಸುವ ಕಾರ್ಯ ಮಾಡಬೇಕಾಗಿದೆ. ಇಂತಹ ಯುವ ಮನಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ನುಡಿಸಿರಿ ಸಮ್ಮೇಳನದಲ್ಲಿ ಭಾಗವಹಿಸಬೇಕಾಗಿದೆ. ಯುವ ಜನತೆಯಲ್ಲಿ ಕನ್ನಡದ ಬಗೆಗಿನ ಆಸಕ್ತಿ ಉಂಟಾದಲ್ಲಿ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯ ಎಂದು ಆಳ್ವ ಅಭಿಪ್ರಾಯಪಟ್ಟರು.

ಆಳ್ವಾಸ್ ನುಡಿಸಿರಿ 2011-ಎಂ.ಎಂ.ಕಲಬುರ್ಗಿ ಅಧ್ಯಕ್ಷರು

ಆಳ್ವಾಸ್ ನುಡಿಸಿರಿ 2011 ಇದೇ ನವೆಂಬರ್ 11,12 ಮತ್ತು 13ರಂದು ಮೂಡಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯಲಿದೆ. ಇದರ ಸರ್ವಾಧ್ಯಕ್ಷರಾಗಿ ಎಂ.ಎಂ.ಕಲಬುರ್ಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಆಳ್ವಾಸ್ ಎಜುಕೇಷನ್ ಫೌಂಡೇಷನ್ ಆಶ್ರಯದಲ್ಲಿ ನಡೆಯಲಿರುವ ಎಂಟನೇ ವರುಷದ ” ಆಳ್ವಾಸ್ ನುಡಿಸಿರಿ”ಯ ಸವರ್ಾಧ್ಯಕ್ಷರಾಗಿ ಸಂಶೋಧಕ ಎಂ.ಎಂ.ಕಲಬುಗರ್ಿ ಸವರ್ಾನುಮತದಿಂದ ಆಯ್ಕೆಗೊಂಡಿದ್ದಾರೆ. ನುಡಿಸಿರಿ ಸ್ವಾಗತ ಸಮಿತಿ ಈ ನಿಧರ್ಾರ ಕೈಗೊಂಡಿದೆ. ಹಂಪಿ ವಿಶ್ವವಿದ್ಯಾನಿಲಯ ಕೊಡಮಾಡುವ ಪ್ರತಿಷ್ಠಿತ ನಾಡೋಜ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪಡೆದಿರುವ ಎಂ.ಎಂ.ಕಲಬುಗರ್ಿ ನವೆಂಬರ್ 11ರಿಂದ 13ರ ತನಕ ಮೂಡಬಿದಿರೆಯಲ್ಲಿ ನಡೆಯುವ ಆಳ್ವಾಸ್ ನುಡಿಸಿರಿ ಸಾರಥ್ಯ ವಹಿಸಿ ಮೂರು ದಿನಗಳ ಆಳ್ವಾಸ್ ನುಡಿಸಿರಿ ಸಮ್ಮೇಳನ ನಡೆಸಿಕೊಡಲಿದ್ದಾರೆ.ಕಳೆದ ವರುಷ ಲೇಖಕಿ ವೈದೇಹಿ ಆಳ್ವಾಸ್ ನುಡಿಸಿರಿ ಸಮ್ಮೇಳನದ ಸಾರಥ್ಯ ವಹಿಸಿ ಯಶಸ್ವಿಯಾಗಿ ಸಮ್ಮೇಳನ ನಡೆಸಿಕೊಟ್ಟಿದ್ದರು.
“ಕನ್ನಡ ಮನಸ್ಸು ಸಂಘರ್ಷ ಮತ್ತು ಸಾಮರಸ್ಯ ” ಪರಿಕಲ್ಪನೆಯಲ್ಲಿ ಈ ಬಾರಿಯ ಆಳ್ವಾಸ್ ನುಡಿಸಿರಿ ಸಮ್ಮೇಳನ ನಡೆಯಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಪ್ರತಿನಿಧಿಗಳು ಸಮ್ಮೇಳನದಲ್ಲಿ ಸದಸ್ಯರಾಗಿ ಭಾಗವಹಿಸುವ ನಿರೀಕ್ಷೆಯಿದೆ. ಇದಕ್ಕಾಗಿ ಈಗಾಗಲೇ ಪೂರ್ವಭಾವೀ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ಕಳೆದ ಏಳು ವರುಷಗಳಿಂದ ಆಳ್ವಾಸ್ ಸಮೂಹ ಸಂಸ್ಥೆ ಯಾವುದೇ ಸರಕಾರಿ ನೆರವನ್ನೂ ಪಡೆಯದೆ ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ನುಡಿಸಿರಿಯನ್ನು ಆಯೋಜಿಸುತ್ತಾ ಬಂದಿದ್ದು, ಸಮಯಪ್ರಜ್ಞೆ, ವ್ಯವಸ್ಥೆ,ಶಿಸ್ತುಬದ್ಧ ಕಾರ್ಯಕ್ರಮ ಸಂಯೋಜನೆಗಳ ಮೂಲಕ “ಮಾದರಿ ಸಮ್ಮೇಳನ” ಎಂಬ ಪ್ರಶಂಸೆಯನ್ನು ಸಮಸ್ತ ಕನ್ನಡಿಗರಿಂದ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಬಾರಿಯೂ ಸಮ್ಮೇಳನವನ್ನು ಸಂಪೂರ್ಣ ಪಾರದರ್ಶಕವಾಗಿ, ವ್ಯವಸ್ಥಿತ ರೀತಿಯಲ್ಲಿ ಸಂಯೋಜನೆಗೊಳಿಸುವ ನಿಟ್ಟಿನಲ್ಲಿ , ಸಮ್ಮೇಳನದಲ್ಲಿ ಜನತೆಯ ಸಹಭಾಗಿತ್ವ ಇನ್ನಷ್ಟು ಮೂಡಬೇಕೆಂಬ ಮಹತ್ವಾಕಾಂಕ್ಷೆಯಿಂದ ಕನರ್ಾಟಕದ ವಿವಿಧ ಕಡೆಗಳಲ್ಲಿ ನುಡಿಸಿರಿ ಪೂರ್ವಭಾವೀ ಸಮಾಲೋಚನಾ ಸಭೆಗಳನ್ನು ನಡೆಸುವ ಬಗ್ಗೆ ಚಿಂತಿಸಲಾಗಿದೆ.

ರಾಜ್ಯದ ಆಯ್ದ ಪ್ರದೇಶಗಳಲ್ಲಿ ಈ ಸಮಾಲೋಚನಾ ಸಭೆ ನಡೆಸಲು ಉದ್ದೇಶಿಸಲಾಗಿದೆ.ರಾಜ್ಯದಾದ್ಯಂತ ಪ್ರತಿಯೊಂದು ಜಿಲ್ಲೆಗಳಲ್ಲೂ ಆಳ್ವಾಸ್ ನುಡಿಸಿರಿಯ ಸ್ಥಳೀಯ ಸಮಿತಿಗಳನ್ನು ರಚಿಸುವ ಬಗ್ಗೆ ಚಿಂತಿಸಲಾಗಿದೆ. ಆಳ್ವಾಸ್ ನುಡಿಸಿರಿ ಪೂರ್ವಭಾವೀ ಸಮಾಲೋಚನಾ ಸಭೆಗಳನ್ನು ತಮ್ಮ ಕ್ಷೇತ್ರಗಳಲ್ಲಿ ನಡೆಸಲು ಆಸಕ್ತ ಕನ್ನಡಾಭಿಮಾನಿಗಳು ಉತ್ಸುಕರಾಗಿದ್ದಲ್ಲಿ ಆಳ್ವಾಸ್ ಸಂಸ್ಥೆಯ ನುಡಿಸಿರಿ ಕಛೇರಿಯನ್ನು ಸಂಪಕರ್ಿಸಬಹುದು.(ದೂರವಾಣಿ ಸಂಖ್ಯೆ : 08258 – 261229,238104 – 111) ಸಮಾಲೋಚನಾ ಸಭೆಗಳನ್ನು ನಡೆಸುವ ಸಂದರ್ಭದಲ್ಲಿ ಸಮ್ಮೇಳನಕ್ಕೆ ಸದಸ್ಯರಾಗಿ ಭಾಗವಹಿಸಲು ಉತ್ಸಕರಾಗಿರುವವರು ಸ್ಥಳದಲ್ಲೇ ಹೆಸರು ನೋಂದಾಯಿಸಿ ಸದಸ್ಯತ್ವ ಪಡೆದುಕೊಳ್ಳಲು ಅವಕಾಶವಿರುತ್ತದೆ. ಪ್ರತಿವರ್ಷದಂತೆ ಈ ಬಾರಿಯೂ ನುಡಿಸಿರಿ ಸಮ್ಮೇಳನದ ಮೂರೂ ದಿನಗಳಲ್ಲೂ ರಾತ್ರಿ ಅಗ್ರಮಾನ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ ಏರ್ಪಡಿಸಲಾಗುವುದು.
ಜಾಗತಿಕ ಸಮ್ಮೇಳನ: ಹತ್ತನೇ ವರುಷದ ನುಡಿಸಿರಿ ಸಮ್ಮೇಳನವನ್ನು ಜಾಗತಿಕ ಮಟ್ಟದ ಸಮ್ಮೇಳನವಾಗಿ ಆಯೋಜಿಸಲಾಗವುದು. ಇದಕ್ಕೆ ಪೂರಕ ಯೋಜನೆ, ಯೋಚನೆಗಳು ಪ್ರಗತಿಯಲ್ಲಿವೆ. ವಿಭಿನ್ನವಾಗಿ, ಅತ್ಯಂತ
ವೈಭವಯುತವಾಗಿ ಅಷ್ಟೇ ವ್ಯವಸ್ಥಿತವಾಗಿ ಹತ್ತನೇ ವರುಷದ ನುಡಿಸಿರಿ ಸಮ್ಮೇಳನ ಮೂಡಿಬರಲಿದೆ. ಎಲ್ಲಾ ಜಿಲ್ಲೆಯಿಂದ ಪ್ರತಿನಿಧಿಗಳು: ಈ ಬಾರಿಯ ನುಡಿಸಿರಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಕನ್ನಡಾಸಕ್ತರು ಪ್ರತಿನಿಧಿಗಳಾಗಿ ಭಾಗವಹಿಸಬೇಕೆಂಬ ಆಸೆ ನಮ್ಮದು. ಕಳೆದ ವರುಷವೂ ಬಹುತೇಕ ಎಲ್ಲಾ ಜಿಲ್ಲೆಗಳಿಂದ ಪ್ರತಿನಿಧಿಗಳು ಆಗಮಿಸಿದ್ದಾರೆ. ಈ ಬಾರಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿನಿಧಿಗಳಾಗಿ ಕನ್ನಡಿಗರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಬೇಕೆಂಬುದು ನಮ್ಮ ಆಸೆ. ಇದಕ್ಕಾಗಿ ಪ್ರತೀ ಜಿಲ್ಲೆಯಲ್ಲಿಯೂ ನುಡಿಸಿರಿಯ ಬಗ್ಗೆ ಸೂಕ್ತ ಮಾಹಿತಿ ಲಭ್ಯವಾಗುವಂತೆ ಪ್ರಚಾರ ಕೈಗೊಳ್ಳಲಾಗುವುದು ಎಂದರು.ಯುವ ಮನಸ್ಸು ಪಾಲ್ಗೊಳ್ಳಲಿ: ಯುವ ಮನಸ್ಸುಗಳು ಕನ್ನಡವನ್ನು ಕಟ್ಟುವ, ಬೆಳೆಸುವ ಕಾರ್ಯ ಮಾಡಬೇಕಾಗಿದೆ. ಇಂತಹ ಯುವ ಮನಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ನುಡಿಸಿರಿ ಸಮ್ಮೇಳನದಲ್ಲಿ ಭಾಗವಹಿಸಬೇಕಾಗಿದೆ. ಯುವ ಜನತೆಯಲ್ಲಿ ಕನ್ನಡದ ಬಗೆಗಿನ ಆಸಕ್ತಿ ಉಂಟಾದಲ್ಲಿ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯ. ಆ ನಿಟ್ಟಿನಲ್ಲಿ ಯುವ ಮನಸ್ಸುಗಳು ಈ ಸಮ್ಮೇಳನದಲ್ಲಿ ಭಾಗವಹಿಸಲು ಉತ್ಸುಕರಾಗಬೇಕು.

Saturday, October 30, 2010

Alva’s Nudisiri 2010 inaugurated traditionally

Mangalore, October 29: Alva’s Nudisiri 2010, a 3-day national-level Kannada literary meet on the theme of Kannada manassu jeevana moulyagalu, was inaugurated traditionally by pouring milk over paddy corn on the premises of Vidhyagiri Sundari Ananda Alva on Oct 28, Friday.























A cultural procession featuring dolls and musical instruments escorted prominent Kannada litterateur Vaidehi, the president of the event, to the dais. Various farming activities such as harvesting paddy, pounding paddy, and separating husk from the rice were demonstrated to the audience.

The event was inaugurated by renowned poet Dr. H. Venkatesh. In his inaugural speech, he said that Kannada has a human soul, which its dance, music, sculptures, and literature clearly illustrates. Speaking in appreciation of the creativity of the Kannada people, he said that they excavated mountains and constructed temples resembling crowns atop mountains. The present generation is enjoying the achievements of its ancestors, he added.

Delivering the presidential address, Vaidehi said that development should have certain limits, adding that no development should be done at the cost of others. Owing to development, people feel that it is ok to ignore problems of farmers such as Gregory Patrao, she said and urged people to place limits on their desires for development.

M. Mohan Alva felicitated Vaidehi with flowers, a shawl, and fruits.

A performance by Badagatittu and Tenkutittu Yakshagana teams formed part of the inaugural ceremony.

M. Mohan Alva, MLA Abhayachandra Jain, Amarnatha Shetty, Jayashree and Anand Alva, were the dignitaries on the dais.